ಮಡಿಕೇರಿ-ವಿರಾಜ್‍ಪೇಟೆ ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Rain--01
ಬೆಂಗಳೂರು, ಜು.16- ಭಾರೀ ಮಳೆ ಹಿನ್ನೆಲೆಯಲ್ಲಿ ಮಡಿಕೇರಿ ಮತ್ತು ವಿರಾಜ್‍ಪೇಟೆ ತಾಲ್ಲೂಕಿನ ಅಂಗನವಾಡಿ ಶಾಲೆಗಳಿಗೆ ಮಾತ್ರ ಇಂದು ರಜೆ ನೀಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ಆಯ ಶಾಲೆಯ ಮುಖ್ಯೋಪಾಧ್ಯಾಯರು ನಿರ್ಧಾರ ಕೈಗೊಳ್ಳಲು ಕೊಡಗು ಜಿಲ್ಲಾಧಿಕಾರಿ ಅವಕಾಶ ನೀಡಿದ್ದಾರೆ.

ಸೋಮವಾರಪೇಟೆ ಮತ್ತು ಮಡಿಕೇರಿ ತಾಲ್ಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಆಯಾ ಶಾಲೆಯ ಮುಖ್ಯೋಪಾಧ್ಯರು ಮಳೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳನ್ನು ನಡೆಸುವ ಹಾಗೂ ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Facebook Comments

Sri Raghav

Admin