ಜು.19, 20 ರಂದು ಮೈಸೂರು, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಿಎಂ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಜು.17-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜು.19 ಹಾಗೂ 20 ರಂದು ಮೈಸೂರು, ಕೊಡಗು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಹಾರಂಗಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಗೆ ಬಾಗೀನ ಅರ್ಪಿಸಲಿದ್ದಾರೆ.ಜು.19 ರಂದು ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಮಧ್ಯಾಹ್ನ ಹಾರಂಗಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಲಿದ್ದಾರೆ. ನಂತರ ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊಡಗು ಜಿಲ್ಲಾಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಅಂದು ಮಡಿಕೇರಿಯಲ್ಲೇ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿ ಜು.20 ರಂದು ಮುಂಜಾನೆ ಭಾಗಮಂಡಲದಲ್ಲಿರುವ ಭಂಗಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ನಂತರ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.ಆನಂತರ ಮೈಸೂರಿಗೆ ಪ್ರಯಾಣ ಬೆಳೆಸುವ ಮುಖ್ಯಮಂತ್ರಿ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅಂದು ಮಧ್ಯಾಹ್ನ ಕಬಿನಿ ಜಲಾಶಯಕ್ಕೂ ಬಾಗೀನ ಅರ್ಪಿಸಲಿದ್ದಾರೆ. ನಂತರ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗೀನ ಅರ್ಪಿಸಲಿದ್ದಾರೆ.

ಸಂಜೆ ಮಂಡ್ಯ ಜಿಲ್ಲಾ ಜೆಡಿಎಸ್ ವತಿಯಿಂದ ಆಯೋಜಿಸಿರುವ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಮರಳಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin