ಎನ್ಡಿಟಿವಿಗೆ ಸಿಎಂ ಕುಮಾರಸ್ವಾಮಿ ನೀಡಿದ ಸಂದರ್ಶನದ ಸಾರಾಂಶ ಇಲ್ಲಿದೆ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

CM-Kumaraswamy--NDTV

ಬೆಂಗಳೂರು. ಜು.17 : ಮುಖ್ಯಮಂತ್ರಿ ಕುಮಾರಸ್ವಾಮಿ ರಾಷ್ಟ್ರೀಯ ಖಾಸಗಿ ವಾಹಿನಿ ಎನ್ಡಿಟಿವಿ ಗೆ ವಿಶೇಷ ಸಂದರ್ಶನ ನೀಡಿದ್ದು ರಾಜ್ಯದಲ್ಲಿ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಅವರು ನೀಡಿದ ಸಂದರ್ಶನದ ಸಾರಾಂಶ ಇಲ್ಲಿದೆ ನೋಡಿ.  ಸ್ವತಃ ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ನೀಡಿದ ಸಹಕಾರದಿಂದ ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಸ್ಥಾಪಿಸಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ರಾಹುಲ್ಗಾಂಧಿ ಅವರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ರಾಜ್ಯದಲ್ಲೂ ಉಪ ಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್ ಮತ್ತು ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರಿಂದಲೂ ಸಹಕಾರ ದೊರೆಯುತ್ತಿದೆ.

ಇತ್ತೀಚೆಗಷ್ಟೇ ನಾನು ನನ್ನ ಚೊಚ್ಚಲ 2.19 ಲಕ್ಷ ಕೋಟಿ ರೂ.ಗಳ ಬಜೆಟ್ ಅನ್ನು ಮಂಡಿಸಿದ್ದೇನೆ. ಇದಕ್ಕಾಗಿ ಅಧಿವೇಶನದಲ್ಲಿ ಅನುಮತಿಯನ್ನು ಪಡೆದುಕೊಂಡಿದ್ದೇನೆ. ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ನನಗೆ ಒಂದು ಅವಕಾಶವನ್ನು ರಾಹುಲ್ ಗಾಂಧಿ ಅವರು ಕಲ್ಪಿಸಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಆಭಾರಿಯಾಗಿದ್ದೇನೆ.

2006ರಲ್ಲಿ ನಾನು ಮಾಡಿದ ತಪ್ಪಿಗಾಗಿ ಪಶ್ಚಾತಾಪ ಪಟ್ಟಿದ್ದೇನೆ. ಅಂದು ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿದ್ದು ನನ್ನ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆಯಾಗಿ ಉಳಿದುಕೊಂಡಿದೆ. ಆ ತಪ್ಪನ್ನು ತಿದ್ದಿಕೊಳ್ಳಲು ನನಗೆ ಒಂದು ಅವಕಾಶ ಸಿಕ್ಕಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಸಕರ್ಾರ ರಚಿಸಿದ್ದೇವೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎನ್ನುವ ವಿಶ್ವಾಸವನ್ನು ಹೊಂದಿದ್ದೇನೆ.

ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಸಾಲ ಮನ್ನಾ ಮಾಡಲು ಕಷ್ಟ ಪಟ್ಟಿದ್ದೇನೆ. ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದೇನೆ. ಆದರೂ ನನ್ನನ್ನು ಜನರು ಬೆಂಬಲಿಸುತ್ತಿಲ್ಲ. ಅವರಿಂದ ಪ್ರೋತ್ಸಾಹ ದೊರೆಯುತ್ತಿಲ್ಲ. ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎನ್ನುವ ನೋವನ್ನು ವ್ಯಕ್ತ ಪಡಿಸುವಾಗ ಪಕ್ಷದ ಖಾಸಗಿ ಸಭೆಯಲ್ಲಿ ಭಾವನಾತ್ಮಕವಾಗಿದ್ದು ನಿಜ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷ ನನಗೆ ಕಿರುಕುಳ ನೀಡುತ್ತಿದೆ ಎಂದು ಭಾವಿಸುವ ಅಗತ್ಯವಿಲ್ಲ. ರಾಜ್ಯದ ಸಂಸದರೊಬ್ಬರು ಐಫೋನ್ ನೀಡಿರುವ ಬಗ್ಗೆ ಮಾಡಿರುವ ಟ್ವೀಟ್ ಅನ್ನು ಗಮನಿಸಿದ್ದೇನೆ. ಈ ಬಗ್ಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಭಾವಿಸಿದ್ದೇನೆ. ಕಾಂಗ್ರೆಸ್ ಪಕ್ಷದ ಸಹಕಾರದೊಂದಿಗೆ ಸುಮಾರು 34 ಸಾವಿರ ಕೋಟಿ ರೂ.ಗಳ ರೈತರ ಸಾಲವನ್ನು ಮನ್ನಾ ಮಾಡಿದ್ದೇನೆ. ರೈತರ ಸಾಲ ಮನ್ನಾದಿಂದ ಅವರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎನ್ನುವ ವಾಸ್ತಾಂಶವನ್ನು ಸಹ ನಾನು ಅರಿತಿದ್ದೇನೆ. ಅವರಿಗಾಗಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಅವರ ಜೀವನಮಟ್ಟವನ್ನು ಮೇಲೆತ್ತಲು ಪ್ರಯತ್ನಿಸುತ್ತೇನೆ.

Facebook Comments

Sri Raghav

Admin