ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Accidnet--01

ಗಾಂಧಿನಗರ, ಜು.18-ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುಜರಾತ್‍ನ ರಾಜ್‍ಕೋಟ್-ಮೊರಾಬಿ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮೊಬ್ರಿ ಜಿಲ್ಲೆಯ ಟಂಕಾರಾ ಪಟ್ಟಣದ ಬಳಿ ಸಂಭವಿಸಿದೆ ಭೀಕರ ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದು. ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟು, ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿವೆ.

ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತ ಕರಣ್‍ರಾಜ್ ವಘೇಲಾ ತಿಳಿಸಿದ್ದಾರೆ.

Facebook Comments

Sri Raghav

Admin