ಅಗತ್ಯಬಿದ್ದರೆ ಶಿರೂರು ಶ್ರೀ ಸಾವಿನ ತನಿಖೆ : ಸಿಎಂ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--02

ಬೆಂಗಳೂರು, ಜು.19- ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥಸ್ವಾಮೀಜಿ ಅವರ ಅಕಾಲಿಕ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು, ಸಾವಿನ ಬಗ್ಗೆ ಅಗತ್ಯವಾದರೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಶ್ರೀಗಳು ಚಿಕ್ಕವಯಸ್ಸಿನಲ್ಲೇ ನಿಧನರಾಗಿರುವುದು ದುಃಖಕರ ಸಂಗತಿ. ಧಾರ್ಮಿಕ ಕ್ಷೇತ್ರದಲ್ಲಿ ಪರಮಪೂಜ್ಯರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಆ ರೀತಿ ಇದ್ದರೆ ತನಿಖೆ ನಡೆಸಲು ಸರ್ಕಾರ ಸಿದ್ಧವಿದೆ. ತನಿಖೆ ಅನಿವಾರ್ಯವಿದೆ ಎಂದರೆ ಅದನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಅನುಮಾನಪಡುವ ಅಂಶಗಳಿಲ್ಲ: ಪರಂ
ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು, ಸ್ವಾಮೀಜಿ ಸಾವಿನಲ್ಲಿ ಅನುಮಾನ ಪಡುವಂತಹ ಅಂಶಗಳು ಈವರೆಗೂ ಕಂಡು ಬಂದಿಲ್ಲ. ಒಂದು ವೇಳೆ ಅನುಮಾನಗಳ ಬಗ್ಗೆ ಸ್ಪಷ್ಟತೆ ಸಿಕ್ಕರೆ ತನಿಖೆ ಮಾಡಿಸಲಾಗುವುದು ಎಂದರು. ಈಗಾಗಲೇ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin