ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಹೋರಾಟಕ್ಕೆ ವಾಟಾಳ್ ಬೆಂಬಲ

ಈ ಸುದ್ದಿಯನ್ನು ಶೇರ್ ಮಾಡಿ

Vatal-Nagaraj--01
ಬೆಂಗಳೂರು,ಜು.19- ಶೈಕ್ಷಣಿಕ ಹಿತದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಪಾಸ್ ನೀಡಬೇಕು. ಬಸ್ ಪಾಸ್‍ಗಾಗಿ ಆಗ್ರಹಿಸಿ 21ರಂದು ವಿದ್ಯಾರ್ಥಿಗಳು ನಡೆಸುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಬೇಧಭಾವವಿಲ್ಲದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಬೇಕು. ಈ ಹಿಂದೆಯಿದ್ದ ಕ್ರಮವನ್ನು ಮುಂದುವರೆಸಬೇಕು ಎಂದು ಹೇಳಿದರು. ಅನೇಕ ತ್ಯಾಗ ಬಲಿದಾನದಿಂದ ಕರ್ನಾಟಕ ಏಕೀಕರಣವಾಗಿದೆ. ವಿಭಜನೆಯ ಮಾತು ಯಾರೂ ಅಡಬಾರದು. ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ವಿಶೇಷ ಅಧಿವೇಶನ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು. ಹೈದರಾಬಾದ್ ಕರ್ನಾಟಕ ಅಭಿವೃದ್ದಿಯ ಬಗ್ಗೆ 371 ಜೆ ವಿಧಿ ಪ್ರಕಾರ ಆ ಭಾಗದ ಜನರಿಗೆ ಸಲ್ಲಬೇಕಾದ ಸೌಲಭ್ಯಗಳು ಸಮರ್ಪಕವಾಗಿ ಸಿಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

Facebook Comments

Sri Raghav

Admin