ಬಿಬಿಎಂಪಿ ನೌಕರರ ಸಂಬಳ ನೀಡದ ಲೆಕ್ಕಾಧಿಕಾರಿಗಳ ಭೂತದಹನಕ್ಕೆ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

Bhoota-dahana

ಬೆಂಗಳೂರು, ಜು.20- ಇಪ್ಪತ್ತು ದಿನ ಕಳೆದರೂ ವೇತನ ಆಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಅಧಿಕಾರಿಗಳು ಮತ್ತು ನೌಕರರು ನಾಳೆ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ವೇತನ ಪರಿಷ್ಕರಣೆ ನೆಪದಲ್ಲಿ 20 ದಿನ ಕಳೆದರೂ ಸಂಬಳ ಪಾವತಿಸದೆ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗಳ ಭೂತದಹನ ನಡೆಸಲು ಬಿಬಿಎಂಪಿ ಸಿಬ್ಬಂದಿಗಳು ಮುಂದಾಗಿದ್ದಾರೆ.

ಸಂಬಳವಾಗದೆ ಸಾಮಾನ್ಯ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದೆ ಪರದಾಡುವಂತಾಗಿದೆ. ಕೂಡಲೇ ವೇತನ ಪಾವತಿಸಿ ಎಂದು ಮುಖ್ಯ ಲೆಕ್ಕಾಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.  ಹೀಗಾಗಿ ನಾಳೆ ಮುಖ್ಯ ಲೆಕ್ಕಾಧಿಕಾರಿಗಳ ಭೂತದಹನ ನಡೆಸಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‍ರಾಜ್ ತಿಳಿಸಿದ್ದಾರೆ.  ನಾಳೆ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಎಲ್ಲ ಎಂಟು ವಲಯಗಳ ಪಾಲಿಕೆ ನೌಕರರು ಮತ್ತು ಸಿಬ್ಬಂದಿಗಳು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

Facebook Comments

Sri Raghav

Admin