ಶಿಕ್ಷಕರು ಬೈದಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Student-Suicide--01

ಕೆಆರ್ ಪೇಟೆ, ಜು.20- ಶಿಕ್ಷಕರ ಬೈಗುಳದಿಂದ ಮನನೊಂದ ವಿದ್ಯಾರ್ಥಿನಿ ಶಾಲಾ ಆವರಣದಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಡಿಮಾರನಹಳ್ಳಿಯ ಚೈತನ್ಯ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ನಡೆದಿದೆ. ಚೈತನ್ಯ ವಿದ್ಯಾನಿಕೇತನ ಶಾಲೆಯಲ್ಲಿ 9ನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಸಂಗೀತ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದೀಯ. ಮುಂದೆ ಚೆನ್ನಾಗಿ ಓದಬೇಕು. ಇಲ್ಲದಿದ್ದರೆ ಟಿಸಿ ಕೊಟ್ಟು ಕಳುಹಿಸಿಕೊಡಬೇಕಾಗುತ್ತದೆ ಎಂದು ಶಿಕ್ಷಕರು ಬೈದಿದ್ದಕ್ಕೆ ನೊಂದ ವಿದ್ಯಾರ್ಥಿನಿ ಶಾಲಾ ಆವರಣದಲ್ಲಿರುವ ತಮ್ಮ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬೆಟ್ಟನಾಯಕ್, ಸರ್ಕಲ್ ಇನ್ಸ್‍ಪೆಕ್ಟರ್ ಎಚ್.ಬಿ.ವೆಂಕಟೇಶಯ್ಯ, ಸಬ್‍ಇನ್ಸ್‍ಪೆಕ್ಟರ್ ಆರ್.ಸಿದ್ದರಾಜು ಭೇಟಿ ನೀಡಿದ್ದರು.

Facebook Comments

Sri Raghav

Admin