ಗ್ಯಾಂಗ್‍ರೇಪ್‍ನಿಂದ ಮನನೊಂದು ಅಪ್ರಾಪ್ತೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

sucaide

ಭೋಪಾಲ್, ಜು.21-ನಾಗರಿಕ ಸಮಾಜ ತಲೆತಗ್ಗಿಸುವಂಥ ಅತ್ಯಾಚಾರ ಮತ್ತು ಗ್ಯಾಂಗ್‍ರೇಪ್ ಪ್ರಕರಣಗಳು ದೇಶದ ವಿವಿಧೆಡೆ ಮುಂದುವರಿದಿವೆ. ಮೂವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆಯೊಬ್ಬಳು ಮನನೊಂದು ಸಾವಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತೆಯ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಘಟನೆಯಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಳು ಎಂದು ಸಾಗರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯ ಪೋಷಕರು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Facebook Comments

Sri Raghav

Admin