ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆ ಹಿಂಪಡೆದ ಕೇಂದ್ರ, ಕೆಲವು ವಸ್ತುಗಳ ಜಿಎಸ್‌ಟಿ ದರ ಕಡಿತ

ಈ ಸುದ್ದಿಯನ್ನು ಶೇರ್ ಮಾಡಿ

Sanitory-Ad

ನವದೆಹಲಿ. ಜು.21 : ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯ ನಿರ್ಧಾರಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಜಿಎಸ್‌ಟಿಯ 28 ನೇ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದ್ದು, ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ದೇಶದ ಮಹಿಳೆಯರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಹಿಂದೆ ಸ್ಯಾನಿಟರಿ ನ್ಯಾಪ್ಕಿನ್ಸ್‌ಗೆ ಶೇ.12 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸರಕು ಮತ್ತು ಸೇವಾ ತೆರಿಗೆ ಸಮಿತಿಯ 28ನೇ ಸಭೆಯಲ್ಲಿ ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್‌ಕಿನ್ ಅನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ. ಶೇ 28ರ ತೆರಿಗೆ ವಿಭಾಗದಲ್ಲಿರುವ ಅನೇಕ ವಸ್ತುಗಳ ಮೇಲಿನ ತೆರಿಗೆ ಪ್ರಮಾಣದಲ್ಲಿ ಸಹ ಇಳಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

1 ಸಾವಿರ ರೂ.ಗಿಂತ ಕಡಿಮೆ ಬೆಲೆಯ ಪಾದರಕ್ಷೆಗಳಿಗೆ ಶೇ 5ರ ಜಿಎಸ್‌ಟಿ ಬೀಳಲಿದೆ. ವಾಷಿಂಗ್ ಮೆಷಿನ್‌ಗಳು, ರೆಫ್ರಿಜಿರೇಟರುಗಳು ಸೇರಿದಂತೆ 17 ಐಷಾರಾಮಿ ಬಳಕೆಯ ಉಪಕರಣಗಳ ಜಿಎಸ್‌ಟಿ ಮೊತ್ತ ಶೇ 18ಕ್ಕೆ ಇಳಿಕೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

ಪೆಟ್ರೋಲ್‌ಗೆ ಬಳಸುವ ಎಥನಾಲ್ ಮೇಲಿನ ತೆರಿಗೆಯು ಶೇ 18 ರಿಂದ 5ಕ್ಕೆ ಇಳಿಕೆಯಾಗಲಿದೆ. ಸುಮಾರು ಒಂದು ವರ್ಷದ ಹಿಂದೆ ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತಂದಾಗ, ಮಹಿಳೆಯರಿಗೆ ಅತ್ಯಗತ್ಯವಾಗಿ ಬೇಕಾದ ಸ್ಯಾನಿಟರಿ ನ್ಯಾಪ್ಕಿನ್ ಮೇಲೆ 12 % ತೆರಿಗೆ ವಿಧಿಸುವ ಮೂಲಕ ದೇಶಾದ್ಯಂತ ಮಹಿಳೆಯರ ಕೆಂಗಣ್ಣಿಗೆ ಕೇಂದ್ರ ಗುರಿಯಾಗಿತ್ತು. ಏಕರೂಪ ತೆರಿಗೆಯಿಂದ ಸ್ಯಾನಿಟರಿ ಪ್ಯಾಡ್ನ್ನು ತೆಗೆಯಬೇಕು ಎಂಬ ಬೇಡಿಕೆ ದೇಶಾದ್ಯಂತ ಕೇಳಿ ಬಂದಿತ್ತು.

ಈ ಬಗ್ಗೆ ಮೌನವಾಗಿದ್ದ ಕೇಂದ್ರ ಸರ್ಕಾರ ಈಗ ಸ್ಪಂದಿಸಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆಯ ಹೆಚ್ಚುವರಿ ಹೊಣೆ ನಿಭಾಯಿಸುತ್ತಿರುವ ಪೀಯೂಶ್ ಗೋಯೆಲ್ ನೇತೃತ್ವದಲ್ಲಿ ನಡೆದ ಜಿಎಸ್ಟಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

Facebook Comments

Sri Raghav

Admin