ಡ್ರಾಪ್ ಕೊಡುವ ನೆಪದಲ್ಲಿ ಸಾಫ್ಟ್’ವೆರ್ ಇಂಜಿನಿಯರ್ ದರೋಡೆ

ಈ ಸುದ್ದಿಯನ್ನು ಶೇರ್ ಮಾಡಿ

robbry

ಬೆಂಗಳೂರು, ಜು.21- ಡ್ರಾಪ್ ಕೊಡುವೆ ನೆಪದಲ್ಲಿ ಸಾಫ್ಟ್’ವೆರ್ ಇಂಜಿನಿಯರ್‍ರೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ನಗದು ಮತ್ತು ಚಿನ್ನದ ಸರ ದರೋಡೆ ಮಾಡಿರುವ ಘಟನೆ ಕಳೆದ ರಾತ್ರಿ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೋಜ್ ಕುಮಾರ್ ನಿನ್ನೆ ರಾತ್ರಿ ಕೆಲಸ ಮುಗಿಸಿ ರಾತ್ರಿ 11 ಗಂಟೆ ಸುಮಾರಿಗೆ ಡೈರಿ ವೃತ್ತದ ಬಳಿ ಇರುವ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಡ್ರಾಪ್ ಕೊಡುವ ನೆಪದಲ್ಲಿ ಅಲ್ಲಿಗೆ ಕಾರಿನಲ್ಲಿ ಬಂದ ದರೋಡೆ ಕೋರರು ಮನೋಜ್ ಅವರನ್ನು ಕಾರಿಗೆ ಹತ್ತಿಸಿಕೊಂಡಿದ್ದಾರೆ.  ಸ್ವಲ್ಪ ದೂರ ಹೋದಾಗ ಕಾರಿನಲ್ಲಿದ್ದ ಇಬ್ಬರು ಅವರಿಗೆ ಚಾಕು ತೋರಿಸಿ ಬೆದರಿಸಿ 3200 ರೂ.ನಗದು ಮತ್ತು ಚಿನ್ನದ ಬ್ಯಾಸ್‍ಲೈಟ್ ಕಿತ್ತುಕೊಂಡಿದ್ದಾರೆ. ಬಳಿಕ ಆನೆಪಾಳ್ಯ ಬಳಿ ಅವರನ್ನು ಕಾರಿನಿಂದ ತಳ್ಳಿ ಪರಾರಿಯಾಗಿದ್ದಾರೆ. ಈ ಬಗ್ಗೆ ಸುದ್ದಗುಂಟೆ ಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Facebook Comments