ಕರ್ನಾಟಕ ಸರ್ಕಾರದಲ್ಲಿ ಮನೆಯೊಂದು ಮೂರು ಬಾಗಿಲು : ಸುರೇಶ್ ಅಂಗಡಿ

ಈ ಸುದ್ದಿಯನ್ನು ಶೇರ್ ಮಾಡಿ

Suresh-angadi--01
ಬೆಳಗಾವಿ, ಜು.22- ರಾಜ್ಯ ಸರ್ಕಾರ ಮನೆಯೊಂದು ಮೂರು ಬಾಗಿಲು ಆದಂತಾಗಿದೆ ಎಂದು ಸಂಸದ ಸುರೇಶ್ ಅಂಗಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳೆಲ್ಲರೂ ಒಂದೊಂದು ದಿಕ್ಕಿನಲ್ಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯವನ್ನು ಮುನ್ನಡೆಸಬೇಕಾದ ಮುಖಂಡರು ಹೀಗೆ ಒಂದೊಂದು ದಿಕ್ಕಿನಲ್ಲಿ ಸಾಗಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳು ಆಗಲು ಹೇಗೆ ಸಾಧ್ಯ ಎಂದ ಅವರು, ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದ ಕೊರತೆಯಿಂದಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.  ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ ಅಂಗಡಿ ಅವರು ಪಕ್ಷವು ನನ್ನನ್ನು ಪರಿಗಣಿಸಿ ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದರು.

Facebook Comments

Sri Raghav

Admin