ಕಾರಿನಲ್ಲಿದ್ದ 6 ಲಕ್ಷ ದೋಚಿ ದುಷ್ಕರ್ಮಿಗಳು ಎಸ್ಕೇಪ್

ಈ ಸುದ್ದಿಯನ್ನು ಶೇರ್ ಮಾಡಿ

Car

ರಾಯಚೂರು, ಜು.22- ಕಾರಿನಲ್ಲಿದ್ದ 6 ಲಕ್ಷ ದೋಚಿರುವ ಘಟನೆ ಇಂದು ಬೆಳಗ್ಗೆ ನಗರದ ಜವಳೇಗೇರಿ ಪಿಡಬ್ಲ್ಯೂಡಿ ಕ್ಯಾಂಪ್‍ನಲ್ಲಿ ನಡೆದಿದೆ. ಬೆಂಗಳೂರಿನಿಂದ ಬಂದಿದ್ದ ಉದ್ಯಮಿಯೊಬ್ಬರು ಸಂಬಂಧಿಕರ ಮನೆಗೆ ಹೋಗಿದ್ದರು. ಕಾರಿನ ಚಾಲಕ ವಾಹನವನ್ನು ಪಕ್ಕದ ರಸ್ತೆಯಲ್ಲಿ ನಿಲ್ಲಿಸಿ ನಿದ್ರೆಗೆ ಜಾರಿದ್ದಾಗ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಾರಿನ ಬಾಗಿಲು ತೆಗೆದು 6 ಲಕ್ಷ ಹಣವಿದ್ದ ಬ್ಯಾಗನ್ನು ಕಸಿದು ಪರಾರಿಯಾಗಿದ್ದಾರೆ. ಬೆಳಗ್ಗೆ ಎದ್ದ ಚಾಲಕ ಗಾಬರಿಗೊಂಡು ನಂತರ ಮಾಲೀಕರಿಗೆ ವಿಷಯ ಮುಟ್ಟಿಸಿದ್ದಾನೆ. ಬಳಗಾನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin