ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಕೊರತೆ ..!

ಈ ಸುದ್ದಿಯನ್ನು ಶೇರ್ ಮಾಡಿ

Low-Rain

ಬೆಂಗಳೂರು, ಜು.22- ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ರಾಜ್ಯದ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ಇದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಒಣಹವೆ ಮುಂದು ವರಿದಿದ್ದು, ಮಳೆ ಕೊರತೆ ಎದುರಿಸುವಂತಾಗಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದು, ಅದು ಆಂಧ್ರಪ್ರದೇಶದ ಕರಾವಳಿಯಲ್ಲಿ ಕೇಂದ್ರೀಕೃತ ವಾಗಿದೆ. ಅದು ದುರ್ಬಲಗೊಳ್ಳುವವರೆಗೂ ರಾಜ್ಯದ ಒಳನಾಡಿನಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗದು ಎಂದರು.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಮುಂದು ವರಿದಿದ್ದರೂ ಅದರ ತೀವ್ರತೆ ತಗ್ಗಿದೆ. ರಾಜ್ಯದ ಒಳನಾಡಿನಲ್ಲಿ ಮೋಡ ಮುಸುಕಿದ ವಾತಾವರಣ ಹಾಗೂ ಆಗಾಗ್ಗೆ ತುಂತುರು ಮಳೆ ಇದ್ದರೂ ಕೂಡ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವಷ್ಟು ಮಳೆಯಾಗುತ್ತಿಲ್ಲ. ಈಗಾಗಲೇ ಒಳನಾಡಿನ ಹಲವು ಭಾಗಗಳಲ್ಲಿ ತೇವಾಂಶದ ಕೊರತೆ ಕಂಡು ಬಂದಿದೆ. ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಿದೆ. ಇದರಿಂದ ಬಿತ್ತನೆ ಕಾರ್ಯಕ್ಕೂ ಹಿನ್ನಡೆ ಉಂಟಾಗಿದೆ. ಕೆಲವು ಪ್ರದೇಶಗಳಲ್ಲಿ 4 ರಿಂದ 5 ವಾರಗಳ ಕಾಲ ನಿರಂತರವಾಗಿ ಮಳೆ ಬಿದ್ದಿಲ್ಲ ಎಂದು ತಿಳಿಸಿದರು.

Facebook Comments

Sri Raghav

Admin