ಅಪಹರಿಸಿ, ಕತ್ತು ಸೀಳಿ ಯುವಕನ ಬರ್ಬರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder--01

ರಾಮನಗರ, ಜು.22- ಯುವಕನೊಬ್ಬನನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಚನ್ನಪಟ್ಟಣ ತಾಲೂಕಿನ ಲಾಳಘಟ್ಟ ರಸ್ತೆಯ ತೋಟವೊಂದರಲ್ಲಿ ನಡೆದಿದೆ. ಮೃತ ವ್ಯಕ್ತಿಯು ವಾಸಿಮ್ (26) ಎಂದು ತಿಳಿದುಬಂದಿದೆ. ಅಪರಿಚಿತ ದುಷ್ಕರ್ಮಿಗಳು ಈತನನ್ನು ಅಪಹರಿಸಿ ಕೊಲೆ ಮಾಡಿ ಇಲ್ಲಿ ತಂದು ಹಾಕಿರಬಹುದು ಎಂದು ಹೇಳಲಾಗಿದೆ.  ವಾಸಿಮ್ ಚನ್ನಪಟ್ಟಣದ ಇಂದಿರಾ ಕಾಟೇಜ್‍ನಲ್ಲಿ ವಾಸವಾಗಿದ್ದ. ನಿನ್ನೆ ರಾತ್ರಿ ಸ್ನೇಹಿತರನ್ನು ನೋಡಲು ಹೋಗಿದ್ದ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಚನ್ನಪಟ್ಟಣ ಪೂರ್ವ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin