ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬೈಸಿಕಲ್ ನೀಡುವಂತೆ ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

CM-Meeting--01

ಬೆಂಗಳೂರು, ಜು. 24 : ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಿಸುವಾಗ ಉತ್ತಮ ಗುಣಮಟ್ಟದ ಬೈಸಿಕಲ್ ಒದಗಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೈಸಿಕಲ್ ವಿತರಣೆ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಗೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು 2018-19ನೇ ಸಾಲಿಗೆ 5.14 ಲಕ್ಷ ಬೈಸಿಕಲ್‍ಗಳನ್ನು ಅಂದಾಜು 184 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುತ್ತಿದ್ದು, ಮೂರು ಹಂತಗಳಲ್ಲಿ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಹಿಂದಿನ ವರ್ಷಗಳಲ್ಲಿ ವಿತರಿಸಲಾಗಿರುವ ಬೈಸಿಕಲ್‍ಗಳ ಕುರಿತು ಪೋಷಕರು ಅತೃಪ್ತಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.  ಇದೇ ಸಂದರ್ಭದಲ್ಲಿ ಶಾಲೆಗಳ ಕಟ್ಟಡಗಳ ನಿರ್ವಹಣೆಗಳ ಕುರಿತು ವಿವರವಾದ ಮಾಹಿತಿಯೊಂದಿಗೆ ದುರಸ್ತಿಯಾಗಬೇಕಾದ ಹಾಗೂ ಹೆಚ್ಚುವರಿಯಾಗಿ ನಿರ್ಮಿಸಬೇಕಾದ ಶಾಲಾ ಕೊಠಡಿಗಳ ಕುರಿತು ವಿವರವಾದ ಮಾಹಿತಿ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕಾರ್ಪೊರೇಟ್ ಸಂಸ್ಥೆಗಳಿಂದ ಈ ಉದ್ದೇಶಕ್ಕೆ ನೆರವು ಪಡೆಯಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು

Facebook Comments

Sri Raghav

Admin