ಮಲೆನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಂದು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Rain--011
ತೀರ್ಥಹಳ್ಳಿ, ಜು.25- ಮಲೆನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆಗುಂಬೆಯ ಕಾರ್ಯಕುಂಬ್ರಿ ಕಾಲುಕುಡಿಗೆ ಗ್ರಾಮದ ಚಂದ್ರಶೇಖರ್(58) ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ದುರ್ದೈವಿ. ನಿನ್ನೆ ರಾತ್ರಿ ತೋಟಕ್ಕೆ ಹೋಗಿದ್ದಾಗ ತುಂಬಿ ಹರಿಯುತ್ತಿರುವ ಹಳ್ಳದಲ್ಲಿ ಕೊಚ್ಚಿ ಹೋಗಿ ಅವರು ಸಾವನ್ನಪ್ಪಿದ್ದು, ಅವರ ಶವ ಹಳ್ಳದಲ್ಲೇ ಪತ್ತೆಯಾಗಿದೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿರುವುದರಿಂದ ರಾತ್ರಿ ಶವ ಪರಿಶೀಲನೆಗೆ ತೆರಳಿರಲಿಲ್ಲ.  ಇದೀಗ ಶವ ಪತ್ತೆಯಾಗಿದ್ದು, ಆಗುಂಬೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಂದ್ರಶೇಖರ್ ನಿನ್ನೆ ರಾತ್ರಿ ತೋಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಸಿಡಿಲು ಬಡಿದಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ. ಮಲೆನಾಡಿನಲ್ಲಿ ಮಳೆ ಹೆಚ್ಚುತ್ತಿದ್ದು, ಈಗಾಗಲೇ ಕೊಪ್ಪ ಮತ್ತು ಶೃಂಗೇರಿಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಇದೀಗ 2ನೇ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin