ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ : ಲೋಕಸಭೆಯಲ್ಲಿ ಗದ್ದಲ, ಕಲಾಪ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Loksabha--01

ನವದೆಹಲಿ, ಜೂ.25-ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಿಯರೆಂಬ ಶಂಕೆಯಿಂದ ನಾಲ್ವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾಮೂಹಿಕ ಹಲ್ಲೆ ನಡೆಸಿದ ಪ್ರಕರಣ ಲೋಕಸಭೆಯಲ್ಲಿ ಇಂದು ಪ್ರತಿಧ್ವನಿಸಿ ಭಾರೀ ಗದ್ದಲಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು. ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಮಹಿಳೆಯರೂ ಸೇರಿದಂತೆ ಅಮಾಯಕರ ಮೇಲೆ ಗುಂಪು ದಾಳಿ ನಡೆದಿದೆ ಎಂದು ಬಿಜೆಪಿ ಸದಸ್ಯ ಕಿರೀಟ್ ಸೋಮಯ್ಯ ವಿಷಯ ಪ್ರಸ್ತಾಪಿಸಿದರು.

ಈ ಆರೋಪಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಎಡಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದಾಗ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾದ-ವಾಗ್ವಾದ ಮತ್ತು ಮಾತಿನ ಚಕಮಕಿ ನಡೆಯಿತು.   ಸಂಸದೀಯ ವ್ಯವಹಾರಗಳ ಸಚಿವ ಅನಂತ್‍ಕುಮಾರ್ ಸೇರಿದಂತೆ ಇತರೆ ಸಚಿವರು ಉದ್ರಿಕ್ತ ಸದಸ್ಯರನ್ನು ಸಮಾಧಾನಗೊಳಿಸಲು ಯತ್ನಿಸಿದರೂ ಗದ್ದಲ ಮುಂದುವರಿಯಿತು. ಇದರಿಂದ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಕಲಾಪವನ್ನು 30 ನಿಮಿಷ ಮುಂದೂಡಿದರು.

Facebook Comments

Sri Raghav

Admin