ರಾಜಕೀಯ ಲಾಭಕ್ಕಾಗಿ ಬಿಜೆಪಿಯವರಿಂದ ರೈತರ ಪರ ಪಾದಯಾತ್ರೆ

ಈ ಸುದ್ದಿಯನ್ನು ಶೇರ್ ಮಾಡಿ

HDK--01

ಬೆಂಗಳೂರು,ಜು.26-ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರೈತರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಟೀಕಿಸಿದ್ದಾರೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಪಾದಯಾತ್ರೆಯನ್ನು ನಾವು ಸ್ವಾಗತಿಸುತ್ತೇವೆ. ಹೋರಾಟ ಅಥವಾ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇರುತ್ತದೆ. ಕನಿಷ್ಟ ಈಗಲಾದರೂ ರೈತರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದಾರಲ್ಲ ಎಂದರು.

HDK--04

ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ 48 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದೆ. ಅದಕ್ಕೆ ಬಿಜೆಪಿಯವರು ಬೆಂಬಲವಾಗಿ ನಿಲ್ಲುತ್ತಾರೋ, ವಿರೋಧವಾಗುತ್ತಾರೋ ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ. ಪದೇ ಪದೇ ಈ ಬಗ್ಗೆ ಚರ್ಚೆ ಬೇಡ ಎಂದು ಹೇಳಿದರು. ಆದರೆ ಅವರು ವೈಯಕ್ತಿಕ ಹಾಗೂ ರಾಜಕೀಯ ಲಾಭಕ್ಕೆ ಹೋರಾಟ ನಡೆಸಲಾಗುತ್ತಿದೆ.

HDK--03

ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಏಕೆ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಈಗಲಾದರೂ ಬಿಜೆಪಿಯವರು ರೈತರ ಪರ ಹೋರಾಟ ಮಾಡುತ್ತಿದ್ದಾರಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯಕ್ಕಾಗಿ ಬಂದ್ ಕರೆ ನೀಡಿರುವ ಸಂಘದವರು ಮೊದಲು ಉತ್ತರಿಸಲಿ. ಈಗ ಎರಡು ತಿಂಗಳ ಹಿಂದಿನಿಂದ ಈ ಸಮಸ್ಯೆ ಆರಂಭವಾಯಿತೇ, ಬೆಳಗಾವಿಯಲ್ಲಿ ವಿಭಜನೆ ಮಾಡಲೆಂದು ಸುವರ್ಣ ಸೌಧ ನಿರ್ಮಿಸಿದೆವೇ ಎಂದು ಪ್ರಶ್ನಿಸಿದರು.   ಅಖಂಡ ಕರ್ನಾಟಕದ ದೃಷ್ಟಿಯಿಂದ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ತಾರತಮ್ಯ ನಿರ್ಲಕ್ಷ ತೊಡೆದು ಹಾಕಲು ಸುವರ್ಣಸೌಧ ನಿರ್ಮಿಸಲಾಗಿದೆ. ಆದರೆ ಇದೀಗ ಪ್ರತ್ಯೇಕ ರಾಜ್ಯಕ್ಕೆ ಬಂದ್ಗೆ ಕರೆ ನೀಡುವವರು ಮೊದಲು ಅಭಿವೃದ್ದಿ ಎಷ್ಟಾಗಿದೆ, ತಾರತಮ್ಯ ಏನಾಗಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ನಾವು ಉತ್ತರಿಸಲು ಸಿದ್ದ ಎಂದು ಸವಾಲು ಹಾಕಿದರು.

HDK--02

Facebook Comments

Sri Raghav

Admin