ತಿರುಪತಿ ತಿಮ್ಮಪ್ಪನ ಮೊರೆಹೋದ ಗೌಡರ ಕುಟುಂಬ

ಈ ಸುದ್ದಿಯನ್ನು ಶೇರ್ ಮಾಡಿ

Devegowda--01
ಬೆಂಗಳೂರು, ಜು.26- ಚಂದ್ರಗ್ರಹಣ ಮುನ್ನಾ ದಿನವಾದ ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಆಂಧ್ರಪ್ರದೇಶಕ್ಕೆ ತೆರಳಲಿದೆ.  ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ದೇವೇಗೌಡ, ಸಚಿವ ಎಚ್.ಡಿ.ರೇವಣ್ಣ ಸೇರಿದಂತೆ ಅವರ ಕುಟುಂಬದ ಸದಸ್ಯರು ಇಂದು ಸಂಜೆ ತಿರುಪತಿಗೆ ಪ್ರವಾಸ ಬೆಳೆಸಲಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಳಿಕ ಇಂದು ರಾತ್ರಿ ಅಲ್ಲೇ ತಂಗಲಿರುವ ಇಡೀ ಕುಟುಂಬ ನಾಳೆ ಬೆಳಿಗ್ಗೆ ಪದ್ಮಾವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದೆ. ನಾಳೆ ಮಧ್ಯಾಹ್ನದ ಬಳಿಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook Comments

Sri Raghav

Admin