ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ತಂದೆಗೆ 5 ವರ್ಷ ಜೈಲು ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Jail--02

ಬೆಂಗಳೂರು, ಜು.27- ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಗೆ ಸಿಟಿ ಸಿವಿಲ್ ಸೆಷನ್ ನ್ಯಾಯಾಲಯ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿದ ಪತಿ ರವಿ ವಿರುದ್ಧ ಆತನ ಪತ್ನಿ ಹನುಮಂತನಗರ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊ ಲೀಸರು ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಸಿಟಿ ಸಿವಿಲ್ ಸೆಷನ್ -54ನೇ ನ್ಯಾಯಾಲಯಕ್ಕೆ ಆರೋಪಿ ರವಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ಆರೋಪಿಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ, 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Facebook Comments