ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ನನ್ನ ಸಂಪೂರ್ಣ ವಿರೋಧವಿದೆ : ಹೊರಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Basavaraj-Horatti

ವಿಜಯಪುರ,ಜು.29- ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂಬ ಬೇಡಿಕೆಗೆ ತಮ್ಮ ಸಂಪೂರ್ಣ ವಿರೋಧವಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.   ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯ ಮಾಡಲು ಒಪ್ಪುವುದಿಲ್ಲ. ಮಹಾಪುರುಷರು ಅಖಂಡ ಕರ್ನಾಟಕ ನಿರ್ಮಾಣಕ್ಕಾಗಿ ಹೋರಾಟ ಮಾಡಿದ್ದಾರೆ. ಅವರ ಆಶಯದಂತೆ ಅಖಂಡ ಕರ್ನಾಟಕವಾಗಿಯೇ ಉಳಿಯಬೇಕು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಿದ್ದು, ಮುಂಬರುವ ದಿನಗಳಲ್ಲಿ ಉತ್ತರ ಕರ್ನಾಟಕದ ಭಾಗದಲ್ಲೂ ಸಭೆಗಳನ್ನು ನಡೆಸಲಿದ್ದಾರೆ. ಆ ಸಭೆಗಳಲ್ಲಿ ಹೋರಾಟಗಾರರು, ಮಠಾಧೀಶರು ಭಾಗಿಯಾಗಿ ಉತ್ತರ ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯದ ಬಗ್ಗೆ ಚರ್ಚಿಸಲಿ ಎಂದು ಹೇಳಿದರು.
ವಿಜಯಪುರ, ಹುಬ್ಬಳ್ಳಿ , ಬೆಳಗಾವಿಯಲ್ಲಿ ಸಭೆಗಳು ನಡೆಯಲಿದ್ದು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದರೆ ರಾಜ್ಯ ಸರ್ಕಾರ ಸರಿಪಡಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕೆಲವು ಸ್ವಾಮೀಜಿಗಳಿಗೆ ರಾಜಕೀಯ ಏಕೆ ಬೇಕು ಎಂದು ಪ್ರಶ್ನಿಸಿದ ಅವರು, ಯಾವುದೇ ಆರೋಪವನ್ನು ಒಬ್ಬರ ಮೇಲೆ ಇನ್ನೊಬ್ಬರು ಹೇರುವುದು ಸರಿಯಲ್ಲ. ವೈಯಕ್ತಿಕ ರಾಜಕೀಯಕ್ಕಾಗಿ ಪ್ರತ್ಯೇಕ ರಾಜ್ಯದ ಪ್ರಸ್ತಾಪ ಮಾಡಬಾರದು. ಇದರಿಂದ ಯಾವುದೇಉಪಯೋಗವಾಗುವುದಿಲ್ಲ ಎಂದರು.

Facebook Comments

Sri Raghav

Admin