ಯಮುನಾ ನದಿ ನೀರಿನ ಮಟ್ಟ ಏರಿಕೆ, ಮುಳುಗುವ ಭೀತಿಯಲ್ಲಿ ದೆಹಲಿ, ಕೇಜ್ರಿವಾಲ್ ತುರ್ತುಸಭೆ

ಈ ಸುದ್ದಿಯನ್ನು ಶೇರ್ ಮಾಡಿ

yamuna-River--01

ನವದೆಹಲಿ,ಜು.29- ಉತ್ತರ ಭಾರತದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಯಮುನಾ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ಬೆಳಗ್ಗೆ 10 ಗಂಟೆ ವೇಳೆಗೆ ಯಮುನಾ ನದಿ ನೀರಿನ ಮಟ್ಟವು 204.83 ಮೀಟರ್ ದಾಟಿದ್ದು, ಹರಿಯಾಣದ ಹತ್ನಿಕುಂಡದಿಂದ ನೀರನ್ನು ಹೊರಬಿಡಲಾಗಿದೆ ಎಂದು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ತುರ್ತುಸಭೆ ಕರೆದಿದ್ದು, ನದಿಯ ಸಮೀಪ ವಾಸಿಸುತ್ತಿರುವ ಜನರನ್ನು ಸ್ಥಳಾಂತರ ಮಾಡಲು ಸರ್ಕಾರಕ್ಕೆ ಆದೇಶ ನೀಡಿದ್ದಾರೆ.

yamuna-River--03

ಹರಿಯಾಣದ ಹಾತ್ನಿಕುಂಡ್ ನಿಂದ ನೀರನ್ನು ಬಿಡುಗಡೆ ಮಾಡಿರುವುದು ಹಾಗೂ ಭಾರೀ ಮಳೆ ಎರಡೂ ಯುಮುನಾ ನದಿ ಅಪಾಟಮಟ್ಟ ಮೀರಿ ಹರಿಯಲು ಕಾರಣವಾಗಿದೆ. ಯುಮುನಾದಿ ಅಪಾಟ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜನರಿಗೆ ಮುನ್ನೆಚ್ಚರಿಕೆಗಳನ್ನು ನೀಡಿರುವ ಅಧಿಕಾರಿಗಳು, ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸಗಳನ್ನು ಮಾಡುತ್ತಿದ್ದಾರೆ.

ದೆಹಲಿಯ ಯುಮುನಾ ನದಿಯ ಮಟ್ಟ 204.83ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಇಂದು ಬೆಳಿಗ್ಗೆ 10 ಗಂಟೆ ಸುಮಾರಿದೆ ನದಿಯ ನೀರಿನ ಮಟ್ಟ 205.06 ಮೀಟರ್’ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಸಮಯದಲ್ಲಿ ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು. ಆದರೆ, ಪ್ರಸ್ತುತ ಯಾವುದೇ ರೀತಿಯ ಅಪಾಯಗಳಿಲ್ಲ ಎಂದು ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಇಲಾಖೆ ತಿಳಿಸಿದೆ. ಇಂದು ಬೆಳಿಗ್ಗೆ ಹರಿಯಾಣ ಸರ್ಕಾರ ಯುಮುನೆಗೆ 2,11,874 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿತ್ತು. ಈ ನೀರನ್ನು ದೆಹಲಿ ಜನತೆಯು ಕುಡಿಯುವ ನೀರಾಗಿ ಬಳಕೆ ಮಾಡುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ನೀರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿ ಅಪಾಯಮಟ್ಟದಲ್ಲಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದಲ್ಲಿರುವ ಜನರನ್ನು ಸ್ಥಳಾಂತರ ಮಾಡಲು ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ.

yamuna-River--02

ಉತ್ತರಪ್ರದೇಶದಲ್ಲಿ 49 ಜನರ ಸಾವು
ಉತ್ತರಪ್ರದೇಶದಲ್ಲಿ ಹಲವು ದಿನಗಳಿಂದಲೂ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯಿಂದ ಸಂಭವಿಸಿದ ದುರಂತಗಳಲ್ಲಿ ಕಳೆದೆರಡು ದಿನಗಳಲ್ಲಿ ಒಟ್ಟು 49 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.  ಸಹರಾನ್ಪುರ ಒಂದರಲ್ಲೇ 11 ಮಂದಿ ಸಾವನ್ನಪ್ಪಿದ್ದು, ರಾಜ್ಯದ ವಿವಿಧೆಡೆಗಳಲ್ಲಿ ಸಂಭವಿಸಿದ ಅವಘಡಗಳಲ್ಲಿ ಒಟ್ಟು 49 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin