ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ಉಪರಾಷ್ಟ್ರಪತಿ

ಈ ಸುದ್ದಿಯನ್ನು ಶೇರ್ ಮಾಡಿ

Venkaiah--01

ಚೆನ್ನೈ,ಜು.29- ನಗರದ ಕಾವೇರಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದ್ದು, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಯೋಗಕ್ಷೇಮ ವಿಚಾರಿಸಿದ್ದಾರೆ. ಅಧೀನಂ ಪೀಠದ ಶ್ರೀ ಅರುಣಗಿರಿನಾಥ ಜ್ಞಾನ ಸಂಬಂಧ ದೇಶಿಕ ಪರಮಾಚಾರ್ಯ ಸ್ವಾಮೀಜಿ, ಟಿಎಂಸಿ ಪಕ್ಷದ ವಕ್ತಾರ ಡೇರಿಕ್ ಒಬ್ರಿಯನ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ಈ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿ ಸ್ಟಾಲಿನ್ ಮತ್ತು ಕನಿಮೊಳಿ ಜೊತೆ ಮಾತುಕತೆ ನಡೆಸಿದರು. ತುರ್ತು ಚಿಕಿತ್ಸಾ ಘಟಕದಲ್ಲಿ ತಜ್ಞ ವೈದ್ಯರ ತಂಡವು ಕರುಣಾನಿಧಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ವೈದ್ಯಕೀಯ ಚಿಕಿತ್ಸೆ ನೆರವಿನಿಂದ ಅವರ ಆರೋಗ್ಯ ಸ್ಥಿರವಾಗಿದೆ. ಎಂದು ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಡಾ.ಅರವಿಂದ ಸೆಲ್ವರಾಜ್ ತಿಳಿಸಿದ್ದಾರೆ.

Facebook Comments

Sri Raghav

Admin