ಸುವರ್ಣ ಸೌಧದ ಬಳಿ ಮಠಾಧೀಶರ ಧರಣಿ, ಸಮ್ಮಿಶ್ರ ಸರ್ಕಾರಕ್ಕೆ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

North-Karnataka-Swamiji

ಬೆಳಗಾವಿ, ಜು.31- ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಈ ಭಾಗದ 60ಕ್ಕೂ ಅಧಿಕ ಮಠಾಧೀಶರು ಮತ್ತು ಸಂಘ ಸಂಸ್ಥೆಗಳ ಮುಖಂಡರ ನೇತೃತ್ವದಲ್ಲಿ ಇಂದು ಸುವರ್ಣ ಸೌಧದ ಬೃಹತ್ ಪ್ರತಿಭಟನೆ ನಡೆಯಿತು. ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕ ಭಾಗದ ಸ್ವಾಮೀಜಿಗಳು ಬೀದಿಗಿಳಿದಿದ್ದು, ಸಮ್ಮಿಶ್ರ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ. ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯದ ಬೇಡಿಕೆ ನಮ್ಮದಲ್ಲ ಎಂದು ಸ್ಪಷ್ಟಪಡಿಸಿರುವ ಹೋರಾಟಗಾರರು, ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯೇ ನಮ್ಮ ಮುಖ್ಯ ಬೇಡಿಕೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಹುಕ್ಕೇರಿ ಮಠದ ಚಂದ್ರಶೇಖರ್ ಶಿವಾಚಾರ್ಯರು, ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಯಾಗಬೇಕು. ಮುಂದಿನ ದಿನಗಳಲ್ಲಿ ಈ ಭಾಗವನ್ನು ನಿರ್ಲಕ್ಷಿಸಿದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಸರ್ಕಾರದ ಪ್ರಮುಖ ಕಚೇರಿಗಳನ್ನು ಬೆಂಗಳೂರಿನಿಂದ ಬೆಳಗಾವಿಯ ಸುವರ್ಣ ಸೌಧಕ್ಕೆ ವರ್ಗಾಯಿಸಿ ಅದನ್ನು ಒಂದು ಶಕ್ತಿಯುತ ಕೇಂದ್ರವನ್ನಾಗಿ ಮಾಡಬೇಕು. ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡದ್ ಒತ್ತಾಯಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸರ್ಕಾರ ತನ್ನ ನಿಲುವು ಬದಲಾಯಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಸಿಎಂ ನಿವಾಸಕ್ಕೆ ಹೆಚ್ಚಿನ ಭದ್ರತೆ
ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹುಬ್ಬಳ್ಳಿಯ ಬೈರಿದೇವರಕೊಪ್ಪದ ಮಾಯಾಂಕಾರ ಕಾಲೋನಿಯಲ್ಲಿ ಕುಮಾರಸ್ವಾಮಿಯವರ ಮನೆ ಇದ್ದು, ಈ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯ ಸುತ್ತ ಪೊಲೀಸರನ್ನು ನಿಯೋಜಿಸಲಾಗಿದೆ.

Facebook Comments

Sri Raghav

Admin