ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಮರು ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

karnataka-Revine-dept
ಬಳ್ಳಾರಿ ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ 24-03-2018 ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಸ್ಥಗಿತಗೊಳಿಸಲಾಗಿತ್ತು. ಈಗ ಇದೇ ಹುದ್ದೆಗಳಿಗೆ ಪುನಃ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ವಂಚಿತರಾಗಿದ್ದವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಬಳ್ಳಾರಿ ಜಿಲ್ಲೆಗೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 38
ಹುದ್ದೆಗಳ ವಿವರ
ಗ್ರಾಮ ಲೆಕ್ಕಿಗರ ಹುದ್ದೆ
ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಸಿಬಿಎಸ್’ಸಿ, ಐಸಿಎಸ್’ಇ ನಡೆಸುವ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಕಡ್ಡಾಂiÀiವಾಗಿ ಕಂಪೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ : ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ, 2ಎ,2ಬಿ,3ಎ,3ಬಿ ವರ್ಗದವರಿಗೆ 200 ರೂ, ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.ballari-va.kar.nic.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin