ಕೊನೆಗೂ ಬೋನಿಗೆ ಬಿತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಚಿರತೆ

ಈ ಸುದ್ದಿಯನ್ನು ಶೇರ್ ಮಾಡಿ

Chitha

ಹಾಸನ, ಜು.31- ಜಿಲ್ಲೆಯ ಶ್ರವಣಬೆಳಗೊಳದ ಸುತ್ತಮುತ್ತಲಿನ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಶ್ರವಣಬೆಳಗೊಳದ ಶ್ರೀಕಂಠನಗರದ ಬಡಾವಣೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲ ತಿಂಗಳುಗಳ ಹಿಂದೆ ಚಿರತೆ ಕಾಣಿಸಿಕೊಂಡಿದ್ದು , ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.

ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಕಳೆದ ಒಂದು ವಾರದ ಹಿಂದೆ ಶ್ರೀಕಂಠನಗರದಲ್ಲಿ ಬೋನು ಇಡಲಾಗಿತ್ತು. ಕಳೆದ ರಾತ್ರಿ ಆಹಾರ ಅರಸಿ ಬಂದ ಸುಮಾರು 2 ವರ್ಷದ ಹೆಣ್ಣು ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಇಂದು ಬೆಳಗ್ಗೆ ಸಾರ್ವಜನಿಕರು ಚಿರತೆಯನ್ನು ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ವಿಶ್ವನಾಥ್, ಕರೀಗೌಡ ಪರಿಶೀಲಿಸಿ ಕೊಂಡೊಯ್ದಿದ್ದಾರೆ.

Facebook Comments

Sri Raghav

Admin