ಲವ್ ಫೇಲ್ಯೂರ್’ನಿಂದ ಬೇಸತ್ತು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಈ ಸುದ್ದಿಯನ್ನು ಶೇರ್ ಮಾಡಿ

Suicide--01

ದೊಡ್ಡಬಳ್ಳಾಪುರ, ಜು.31- ಪ್ರೇಮವೈಫಲ್ಯದಿಂದ ಬೇಸತ್ತ ಯುವಕನೊಬ್ಬ ಲೈವ್ ವೀಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕಲ್ಲುಪೇಟೆ ನಿವಾಸಿ ದೇವರಾಜ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ.  ದೇವರಾಜ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಆದರೆ ಅದಕ್ಕೆ ಯುವತಿ ಒಪ್ಪಿರಲಿಲ್ಲ. ಇದೇ ಬೇಸರದಿಂದ ಯುವಕ ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೇವರಾಜ್ ವಿಷ ಸೇವಿಸುತ್ತಿದ್ದ ದೃಶ್ಯವನ್ನು ಲೈವ್ ವೀಡಿಯೋ ಮಾಡಿಕೊಂಡಿದ್ದ. ಇದೀಗ ಈ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin