ಪಾಕ್ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಜೊತೆ ಮೋದಿ ಮಾತುಕತೆ..!

ಈ ಸುದ್ದಿಯನ್ನು ಶೇರ್ ಮಾಡಿ

Modi--And-Imran------01

ಹೊಸದಿಲ್ಲಿ, ಜು.31: ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ನಿಯೋಜಿತ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಪಿಟಿಐ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವವು ಗಟ್ಟಿಯಾಗಿ ನೆಲೆಯೂರಬಹುದು ಎಂದು ಮೋದಿ ಇದೇ ಸಂದರ್ಭ ಭರವಸೆ ವ್ಯಕ್ತಪಡಿಸಿದರು ಎನ್ನಲಾಗಿದೆ. ಸುತ್ತಮುತ್ತಲಿನ ದೇಶಗಳ ನಡುವೆ ಶಾಂತಿ, ಸೌಹಾರ್ದತೆ ಹಾಗು ಅಭಿವೃದ್ಧಿಯ ಬಗ್ಗೆಯೂ ಮೋದಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.  ಈ ವೇಳೆ ನೆರೆಯ ರಾಷ್ಟ್ರಗಳೊಂದಿಗೆ ಸ್ನೇಹ ಸಂಬಂಧ, ಶಾಂತಿ ಮತ್ತು ಅಭಿವೃದ್ಧಿಯ ಕುರಿತಾದ ತಮ್ಮ ದೃಷ್ಟಿಕೋನವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.

ಕಳೆದ ಜುಲೈ 25ರಂದು ನಡೆದ ಪಾಕ್ ಸಾರ್ವತಿಕ್ರ ಚುನಾವಣೆಯಲ್ಲಿ ಪಿಟಿಐ 116 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು ಆಗಸ್ಟ್ 11ರಂದು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Facebook Comments

Sri Raghav

Admin