ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ರಾಜಮಾತೆ ಪ್ರಮೋದಾದೇವಿ ಹೇಳಿದ್ದೇನು.. ?

ಈ ಸುದ್ದಿಯನ್ನು ಶೇರ್ ಮಾಡಿ

Pramoda-Devi--01
ಮೈಸೂರು, ಜು.31- ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲರೂ ಒಗ್ಗಟ್ಟಾಗಿರಬೇಕು ಎಂದರು. ಪ್ರತಿಯೊಂದು ಜಿಲ್ಲೆಯೂ ಪ್ರತ್ಯೇಕವಾಗುತ್ತ ಹೋದರೆ ದೇಶ ಛಿದ್ರವಾಗುತ್ತದೆ. ಪ್ರತ್ಯೇಕ ರಾಜ್ಯವಾಗಲು ಯಾರೂ ಅವಕಾಶ ಕೊಡಬಾರದು ಎಂದು ಹೇಳಿದರು.

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು. ಸ್ಯಾಂಡಲ್‍ವುಡ್‍ನ ಒಡೆಯರ್ ಚಿತ್ರದ ಟೈಟಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಪ್ರಮೋದಾದೇವಿ ಒಡೆಯರ್ ಚಿತ್ರಕ್ಕೆ ಒಡೆಯರ್ ಎಂಬ ಹೆಸರಿಟ್ಟಿರುವುದಕ್ಕೆ ನನ್ನ ಆಕ್ಷೇಪವಿಲ್ಲ. ಈ ಚಿತ್ರದಲ್ಲಿ ನಮ್ಮ ಮನೆತನದ ಬಗ್ಗೆ ಚಿತ್ರಣವಿದ್ದರೆ ಅದನ್ನು ವಿರೋಧಿಸುತ್ತೇನೆ ಎಂದರು.

ದಸರಾ ವಸ್ತು ಪ್ರದರ್ಶನದಲ್ಲಿ ವರ್ಷಪೂರ್ತಿ ವಸ್ತು ಪ್ರದರ್ಶನ ಮಾಡಲು ಸರ್ಕಾರ ನಿರ್ಧರಿಸಿದೆಯಲ್ಲ ಎಂಬ ಪ್ರಶ್ನೆಗೆ ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ನ್ಯಾಯಾಲಯದ ಮುಖಾಂತರ ಈ ಜಾಗ ನಮಗೆ ಬಂದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾಣ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Facebook Comments

Sri Raghav

Admin