ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

Rahul

ಚೆನ್ನೈ, ಜು.31-ತೀವ್ರ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಡಾ. ಎಂ. ಕರುಣಾನಿಧಿ(94) ಅವರನ್ನು ಇಂದು ಸಂಜೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.  ಈ ಮಧ್ಯೆ ಕರುಣಾನಿಧಿ ಅವರು ಶೀಘ್ರ ಗುಣಮುಖರಾಗಲೆಂದು ಕಾರ್ಯಕರ್ತರು, ಬೆಂಬಲಿಗರು ಹಾಗೂ ಅಭಿಮಾನಿಗಳೂ ಸೇರಿದಂತೆ ಲಕ್ಷಾಂತರ ಮಂದಿ ಇಂದು ಕೂಡ ತಮಿಳುನಾಡಿನ ವಿವಿಧೆಡೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಮುಂದುವರಿಸಿದ್ದಾರೆ. ಡಿಎಂಕೆ ಪರಮೋಚ್ಚ ನಾಯಕ ಕರುಣಾನಿಧಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಚೆನ್ನೈ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಆವರ ಸ್ಥಿತಿ ಗಂಭೀರವಾಗಿದೆ.

ಜ್ವರ ಮತ್ತು ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಅವರಿಗೆ ಚೆನ್ನೈನ ಗೋಪಾಲಪುರಂನಲ್ಲಿರುವ ತಮ್ಮ ನಿವಾಸದಲ್ಲೇ ಕಳೆದ ಗುರುವಾರ ಸಂಜೆಯಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಕಾವೇರಿ ಆಸ್ಪತ್ರೆಯ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಶುಕ್ರವಾರ ಮಧ್ಯರಾತ್ರಿ ರಕ್ತದೊತ್ತಡದಲ್ಲಿ ಗಣನೀಯ ಇಳಿಕೆಯಾಗಿ ಅವರ ಆರೋಗ್ಯದಲ್ಲಿ ಏರುಪೇರಾಯಿತು. ತಕ್ಷಣ ಅವರನ್ನು ಆಸ್ಪತೆಗೆ ದಾಖಲಿಸಲಾಯಿತು. 60 ವರ್ಷಗಳ ಕಾಲ ಶಾಸಕರಾಗಿ ಹಾಗೂ ಸುದೀರ್ಘಾವಧಿ ಡಿಎಂಕೆ ಸಾರಥಿಯಾಗಿ ಅವರು ರಾಜಕೀಯ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದಾರೆ.

Facebook Comments

Sri Raghav

Admin