ಪ್ರಚೋದನಾಕಾರಿ ಹೇಳಿಕೆ ನೀಡಿದ ಮಮತಾ ವಿರುದ್ಧ ಪೊಲೀಸ್ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

DIDI-Mamata

ನವದೆಹಲಿ/ದಿಬ್ರುಗಢ್, ಆ.1-ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯಲ್ಲಿ(ಎನ್‍ಆರ್‍ಸಿ) 40 ಲಕ್ಷಕ್ಕೂ ಅಧಿಕ ಜನರ ಹೆಸರುಗಳು ಕೈಬಿಟ್ಟಿರುವ ಪ್ರಕರಣ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣ ಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಪೊಲೀಸ್ ಪ್ರಕರಣವೊಂದು ದಾಖಲಾಗಿದೆ.

ರಾಜಧಾನಿ ದೆಹಲಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಈ ವಿಷಯ ಪ್ರಸ್ತಾಪಿಸಿದ್ದ ಮಮತಾ, ಎನ್‍ಆರ್‍ಸಿ ಮೂಲಕ ಬಿಜೆಪಿ ದೇಶವನ್ನು ವಿಭಜನೆ ಮಾಡಲು ಹೊರಟಿದೆ. ರಾಜಕೀಯ ಲಾಭಕ್ಕಾಗಿ ಅಸ್ಸಾಂನಲ್ಲಿ ಲಕ್ಷಾಂತರ ಜನರನ್ನು ರಾಜ್ಯ ರಹಿತರನ್ನಾಗಿಸಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ಇದು ಆಗಲು ಬಿಡಬಾರದು. ಇಂಥ ಸನ್ನಿವೇಶವನ್ನು ಸಹಿಸಲು ಸಾಧ್ಯವಿಲ್ಲ. ದೇಶದಲ್ಲಿ ಇದರಿಂದ ನಾಗರಿಕ ದಂಗೆಯಾಗುತ್ತದೆ, ರಕ್ತಪಾತವಾಗುತ್ತದೆ ಎಂದು ಹೇಳಿಕೆ ನೀಡಿದ್ದರು.

ಮಮತಾ ಅವರ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಸ್ಸಾಂನ ದಿಬ್ರುಗಢ್‍ನ ಬಿಜೆಪಿ ಯುವ ಘಟಕದ ಮೂವರು ಕಾರ್ಯಕರ್ತರು, ಇವರ ಪ್ರಚೋದನಕಾರಿ ಹೇಳಿಕೆ ನೀಡಿ ದ್ವೇಷ ಮತ್ತು ಉದ್ವಿಗ್ನತೆಯ ವಾತಾವರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin