ರಾತ್ರಿ 8 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಬಸ್ ಸಂಚಾರ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

Chamundi-Hills
ಮೈಸೂರು,ಆ.1-ಮೂರನೇ ಅಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ರಾತ್ರಿ 8 ಗಂಟೆ ನಂತರ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಸಾದ್ ತಿಳಿಸಿದ್ದಾರೆ. ಆ.3ರಂದು ಆಷಾಢ ಶುಕ್ರವಾರ ಹಾಗೂ ಚಾಮುಂಡೇಶ್ವರಿ ದೇವಿಯ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾಧಿಗಳ ಅನುಕೂಲಕ್ಕಾಗಿ ಲಲಿತ ಮಹಲ್ ಹೆಲಿಪ್ಯಾಡ್‍ನಿಂದ ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6.30ರಿಂದ ರಾತ್ರಿ 8ರವರೆಗೆ ಮಾತ್ರ ಉಚಿತ ಬಸ್ ಸೌಲಭ್ಯ ನೀಡಿರುವುದಾಗಿ ತಿಳಿಸಿದ್ದಾರೆ.

ಅಂದು ಬೆಳಗ್ಗೆ10.25ಕ್ಕೆ ಅಮ್ಮನವರಿಗೆ ಚಿನ್ನದ ಪಲ್ಲಕ್ಕಿ ಉತ್ಸವ ನಡೆಯಲಿದೆ. ರಾತ್ರಿ 8.30ಕ್ಕೆ ದೇವಿಯ ಉತ್ಸವ, ಫಲಪೂಜೆ, ದರ್ಬಾರ್ ಉತ್ಸವ, ಮಂಟಪೋತ್ಸವ ನಡೆಯಲಿದೆ ಎಂದು ತಿಳಿಸಿದ್ದಾರೆ.

Facebook Comments

Sri Raghav

Admin