ವಿದ್ಯಾರ್ಥಿನಿ ಅತ್ಯಾಚಾರ, ಭೀಕರ ಹತ್ಯೆ ಖಂಡಿಸಿ ಬೀದಿಗಿಳಿದ ವಿದ್ಯಾರ್ಥಿಗಳು, ಮಾಲೂರು ಉದ್ವಿಗ್ನ

ಈ ಸುದ್ದಿಯನ್ನು ಶೇರ್ ಮಾಡಿ

protest-malur
ಮಾಲೂರು, ಆ.2- ಸ್ನೇಹಿತೆ ಜತೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ 10ನೆ ತರಗತಿ ವಿದ್ಯಾರ್ಥಿನಿಯನ್ನು ಪೊದೆಯೊಳಗೆ ಎಳೆದೊಯ್ದ ದುಷ್ಕರ್ಮಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವುದನ್ನು ಖಂಡಿಸಿ ಮಾಲೂರಿನಲ್ಲಿಂದು ವಿದ್ಯಾರ್ಥಿಗಳು ವಿವಿಧ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ನಿನ್ನೆ ಎಂದಿನಂತೆ ಶಾಲೆ ಮುಗಿಸಿಕೊಂಡು ಕ್ರೀಡಾ ತರಬೇತಿ ಮುಗಿಸಿ ಸಂಜೆ 5 ಗಂಟೆಯಲ್ಲಿ 10ನೆ ತರಗತಿ ವಿದ್ಯಾರ್ಥಿನಿ ಸ್ನೇಹಿತೆ ಜತೆ ಇಂದಿರಾನಗರ ಮೂಲಕ ಕಾಲುದಾರಿಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಳು.

ಈ ವೇಳೆ ಎದುರಿಗೆ ಬಂದ ಯುವಕ ಈ ವಿದ್ಯಾರ್ಥಿನಿಯನ್ನು ಎಳೆದುಕೊಂಡು ಪೊದೆಯೊಳಗೆ ಹೋಗಿದ್ದಾನೆ. ಇದರಿಂದ ಗಾಬರಿಯಾದ ಸ್ನೇಹಿತೆ ಅಲ್ಲಿಂದ ಓಡಿ ಹೋಗಿದ್ದಾಳೆ. ಸಂಜೆಯಾದರೂ ಶಾಲೆಗೆ ಹೋದ ಮಗಳು ಮನೆಗೆ ಬಾರದಿರುವುದನ್ನು ಗಮನಿಸಿದ ಪೊ ೀಷಕರು ಎಲ್ಲ ಕಡೆ ಹುಡುಕಿ ಈ ಮಾರ್ಗದಲ್ಲಿ ಬಂದಾಗ ಪೊ ದೆ ಬಳಿ ಮಗಳ ಶವ ಪತ್ತೆಯಾಗಿದೆ. ಮಗಳ ಶವ ಕಂಡು ಪೊ ೀಷಕರ ಆಕ್ರಂಧನ ಮುಗಿಲುಮುಟ್ಟಿತ್ತು. ಸುದ್ದಿ ತಿಳಿದ ಮಾಲೂರು ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರತಿಭಟನೆ: ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಶಾಲಾ, ಕಾಲೇಜು ವಿದ್ಯಾರ್ಥಿಗಳು , ವಿವಿಧ ಸಂಘ- ಸಂಸ್ಥೆ ಗಳ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು. ಮಾರಿಕಂಭ ವೃತ್ತದಿಂದ ಬೃಹತ್ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಶಾಲಾ ಕಾಲೇಜುಗಳಿಗೆ ಸ್ವಯಂಘೋಷಿತವಾಗಿ ರಜೆ ಘೋಷಿಸಲಾಗಿತ್ತು.ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸ ಪಡಬೇಕಾ ಯಿತು.
ಪಟ್ಟು ಬಿಡದ ಪ್ರತಿಭಟನಾಕಾರರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ವಿದ್ಯಾರ್ಥಿನಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊ ಲೀಸರು ಕ್ಷಿಪ್ರ ಕಾರ್ಯಾಚರಣೆ ಗೊಂಡಿದ್ದಾರೆ. ಒಂದು ರೀತಿಯಲ್ಲಿ ಮಾಲೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

Facebook Comments