ರಾಜ್ಯದಲ್ಲಿ ಬಾಂಗ್ಲಾ ಪ್ರಜೆಗಳ ಪತ್ತೆ ಕಾರ್ಯ ಚುರುಕು

ಈ ಸುದ್ದಿಯನ್ನು ಶೇರ್ ಮಾಡಿ

DCM-G-Parameswar

ಬೆಂಗಳೂರು, ಆ. 2- ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಗುರುತಿಸುವ ಕೆಲಸ ನಡೆಯುತ್ತಿದ್ದು, ಇದುವರೆಗೆ 107 ಮಂದಿ ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ವೀಸಾ ಇಲ್ಲದೆ ರಾಜ್ಯದಲ್ಲಿ ನೆಲೆಸಿರುವವರನ್ನು ವಾಪಾಸ್ ಕಳುಹಿಸಲಾಗುವುದು ಎಂದು ಗೃಹ ಸಚಿವರೂ ಆದ ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಬಂದ್‍ಗೆ ಸಾರ್ವಜನಿಕರು ಸಹಕಾರ ನೀಡಿಲ್ಲ. ಇದರಿಂದ ಬಂದ್ ಸಂಪೂರ್ಣ ವಿಫಲವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬ ವಿಷಯದಲ್ಲಿ ಎರಡು ಮಾತಿಲ್ಲ. ಆದರೆ ಅದಕ್ಕಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂಬುದು ಸರಿಯಲ್ಲ. ಈ ಬೇಡಿಕೆಗೆ ನಮ್ಮ ಸಹಮತವಿಲ್ಲ. ರಾಜ್ಯವನ್ನು ವಿಭಜಿಸುವ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಒಂದು ಭಾಷೆ ಮತ್ತು ಸಂಸ್ಕøತಿಯ ಜನರು ಒಂದೇ ರಾಜ್ಯದಲ್ಲಿ ಇರಬೇಕು. ರಾಜಕೀಯ ಉದ್ದೇಶದಿಂದ ರಾಜ್ಯ ವಿಭಜನೆ ಬೇಡಿಕೆ ಸರಿಯಲ್ಲ ಎಂದು ಅವರು ಹೇಳಿದರು. ಕೀಕಿ ಡ್ಯಾನ್ಸ್ ಅಪಾಯಕಾರಿಯಾಗಿದ್ದು, ಇದರಲ್ಲಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರು ಕಾನೂನು ಪ್ರಕಾರ ಕ್ರಮಕೈಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದರು.

Facebook Comments

Sri Raghav

Admin