328 ಕೋಟಿ ವಂಚನೆ ಪ್ರಕರಣ : ನಥೆಲ್ಲಾ ಜ್ಯುವೆಲ್ಲರಿ ಮೇಲೆ ಇಡಿ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

nathella-jewellory
ಬೆಂಗಳೂರು/ಚೆನ್ನೈ, ಆ.3- ಬ್ಯಾಂಕುಗಳಿಂದ ಕೋಟ್ಯಂತರ ರೂ.ಗಳ ಸಾಲಗಳನ್ನು ಎತ್ತುವಳಿ ಮಾಡಿ ವಂಚಿಸುತ್ತಿರುವ ಪ್ರಕರಣಗಳು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗಲೇ ಇಂಥ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.  ಬೆಂಗಳೂರು, ಚೆನ್ನೈ ಮತ್ತು ಹೊಸೂರುಗಳಲ್ಲಿ ಶಾಖೆಗಳನ್ನು ಹೊಂದಿರುವ ನಥೆಲ್ಲಾ ಸಂಪತ್ ಜ್ಯುವೆಲ್ಲರಿ ಪ್ರವೇಟ್ ಲಿಮಿಟೆಡ್ ಸಂಸ್ಥೆಯು ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕುಗಳಿಂದ 328 ಕೋಟಿ ರೂ.ಗಳ ಸಾಲ ಪಡೆದು ವಂಚಿಸಿದೆ ಎನ್ನಲಾದ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರು, ಚೆನ್ನೈ ಮತ್ತು ಹೊಸೂರುಗಳಲ್ಲಿನ ಸಂಸ್ಥೆಯ ಕಚೇರಿಗಳು ಹಾಗೂ ಮಾಲೀಕರ ಮನೆಗಳ ಮೇಲೆ ದಾಳಿ  ಮಾಡಿ ದಾಖಲೆ ಪತ್ರಗಳನ್ನು ಪರಿಶೀಲಿಸಿದೆ.  ದಾಳಿ ವೇಳೆ ಬ್ಯಾಂಕ್ ವಹಿವಾಟಿಗೆ ಸಂಬಂಧಪಟ್ಟ ದಾಖಲೆ ಪತ್ರಗಳು ಹಾಗೂ ದಸ್ತಾವೇಜುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Facebook Comments

Sri Raghav

Admin