ಫ್ಲೆಕ್ಸ್ ತೆರವುಗೊಳಿಸುತ್ತಿದ್ದ ಬಿಬಿಎಂಪಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Arreste--TV
ಬೆಂಗಳೂರು, ಆ.3- ನಗರದಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಫ್ಲೆಕ್ಸ್, ಬ್ಯಾನರ್‍ಗಳನ್ನು ತೆರವುಗೊಳಿಸುತ್ತಿದ್ದ ಬಿಬಿಎಂಪಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿದ್ದು ಇವರ ಶೋಧ ಕಾರ್ಯ ಮುಂದುವರೆದಿದೆ.
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‍ಗಳು ರಾರಾಜಿಸುತ್ತಿವೆ ಇವುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಛಾಟಿ ಬೀಸಿತ್ತು. ಈ ಹಿನ್ನೆಲೆಯಲ್ಲಿ ಅವುಗಳನ್ನು ತೆರವುಗೊಳಿಸಲಾಗುತ್ತಿತ್ತು.

ರಾಮಮೂರ್ತಿನಗರದ ಎಂ.ಎಂ.ಟೆಂಪಲ್ ಬಳಿಯ ಹೋಂಡಾ ಷೋರೂಂ ಸಮೀಪ ಫ್ಲೆಕ್ಸ್ , ಬ್ಯಾನರ್‍ಗಳನ್ನು ಬಿಬಿಎಂಪಿ ಕಾರ್ಮಿಕರು ತೆರವುಗೊಳಿಸುತ್ತಿದ್ದಾಗ ಕೆಲವರು ಇದಕ್ಕೆ ಅಡ್ಡಿಪಡಿಸಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಭಟ್ಟಚಾರ್ಯ ಎಂಬುವವರು ರಾಮಮೂರ್ತಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನಾಲ್ವರನ್ನು ಬಂಧಿಸಿ ಇನ್ನಿಬ್ಬರಿಗಾಗಿ ಶೋಧ ಕೈಗೊಂಡಿದ್ದಾರೆ.

Facebook Comments

Sri Raghav

Admin