ಲೋಕಸಭೆ ಚುನಾವಣೆ, ಕೆಪಿಸಿಸಿ ಪುನರ್ ರಚನೆ ಬಗ್ಗೆ ಮಹತ್ವದ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Venugopal--02
ಬೆಂಗಳೂರು, ಆ.3- ಲೋಕಸಭೆ ಚುನಾವಣೆ, ಕೆಪಿಸಿಸಿ ಪುನರ್ ರಚನೆ, ನಿಗಮ-ಮಂಡಳಿಗಳ ನೇಮಕ, ಪಕ್ಷ ಸಂಘಟನೆ, ಶಕ್ತಿ ಯೋಜನೆ ಪರಿಶೀಲನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸುವ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಪಕ್ಷದ ಉಸ್ತುವಾರಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಡಿಸಿಸಿ ಅಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ಕಾರ್ಯಕರ್ತರನ್ನು ಸಂಘಟಿಸುವ ಶಕ್ತಿ ಯೋಜನೆಯ ಕಾರ್ಯವೈಖರಿ, ಸಚಿವರ ಕಾರ್ಯವೈಖರಿ ಬಗ್ಗೆ ಚರ್ಚಿಸಲಾಯಿತು.

ಕೆಪಿಸಿಸಿ ಪುನರ್‍ರಚನೆ ಮಾಡುವ ಬಗ್ಗೆಯೂ ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂದಿನಿಂದ ಮೂರು ದಿನಗಳ ಕಾಲ ಸಭೆ ನಡೆಯಬೇಕಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆಯಿಂದ ಎರಡು ದಿನಗಳ ಕಾಲ ನವದೆಹಲಿಗೆ ತೆರಳಲಿರುವುದರಿಂದ ಎರಡು ದಿನಗಳ ಸಭೆಯನ್ನು ಮುಂದೂಡಲಾಗಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ತೀರ್ಮಾನಿಸಲಾಗಿದೆ.

Facebook Comments

Sri Raghav

Admin