ಹೈಕೋರ್ಟ್‍ನ ಮೂವರು ನ್ಯಾಯಾಧೀಶರನ್ನ ಸುಪ್ರೀಂಕೋರ್ಟ್‍ಗೆ ನ್ಯಾಯಮೂರ್ತಿಗಳಾಗಿ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

S-Supreme-Court
ನವದೆಹಲಿ, ಆ.4-ಹೈಕೋರ್ಟ್‍ನ ಮೂವರು ನ್ಯಾಯಾಧೀಶರುಗಳನ್ನು ಇಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸರ್ವೋನ್ನತ ನ್ಯಾಯಾಲಯದಲ್ಲಿನ ಜಡ್ಜ್‍ಗಳ ಸಂಖ್ಯೆ 25ಕ್ಕೇರಿದೆ.  ಉತ್ತರಾಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಮದ್ರಾಸ್ ಉಚ್ಚ ನ್ಯಾಯಾಲಯದ ಚೀಫ್ ಜಸ್ಟೀಸ್ ಇಂದಿರಾ ಬ್ಯಾನರ್ಜಿ ಹಾಗೂ ಒರಿಸ್ಸಾ ಹೈಕೋರ್ಟ್‍ನ ಮುಖ್ಯ ನ್ಯಾಯಾಧೀಶ ವಿನೀತ್ ಸರನ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾದ ಬಗ್ಗೆ ಇಂದು ಅಧಿಸೂಚನೆ ನೀಡಲಾಗಿದೆ.  ಸುಪ್ರೀಂಕೋರ್ಟ್ ನ್ಯಾಯಾಮೂರ್ತಿಗಳಾಗಿ ಇವರ ನೇಮಕಕ್ಕೆ ನಿನ್ನೆ ರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

Facebook Comments