ಅತ್ಯಾಚಾರದಿಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ, ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Rape-Hang-Rapist
ಬೆಳ್ತಂಗಡಿ, ಆ.5- ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವಾಗಿ ಆಕೆ ಗರ್ಭಿಣಿಯಾಗಿರುವ ವಿಷಯ ತಿಳಿದ ತಾಯಿ ಆಘಾತಗೊಂಡು ನೇಣಿಗೆ ಶರಣಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊ ಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 9ನೆ ತರಗತಿ ಓದುತ್ತಿದ್ದ 15 ವರ್ಷದ ಮಗಳು ಕಳೆದೆರಡು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದುದನ್ನು ಗಮನಿಸಿದ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಈ ಬಾಲಕಿ ಗರ್ಭಿಣಿಯಾಗಿರುವ ವಿಷಯವನ್ನು ವೈದ್ಯರು ತಿಳಿಸಿದ್ದಾರೆ.

ಆ ಕ್ಷಣದಲ್ಲಿ ತಾಯಿ ಈ ಬಗ್ಗೆ ಮಗಳನ್ನು ವಿಚಾರಿಸಿದಾಗ ತನ್ನ ಮೇಲೆ ಅತ್ಯಾಚಾರ ನಡೆದಿರುವುದನ್ನು ತಿಳಿಸಿದ್ದಾಳೆ. ಇದರಿಂದ ಆಘಾತಗೊಂಡ 50 ವರ್ಷದ ತಾಯಿ ಮಾನ-ಮರ್ಯಾದೆಗೆ ಅಂಜಿ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆ ಮಾಡಿಕೊಂಡ ಕಾರಣದ ಬಗ್ಗೆ ಮಗಳನ್ನು ಪೊ ಲೀಸರು ವಿಚಾರಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ವೇಣೂರು ಪೊ ಲೀಸರು ಒಬ್ಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin