ಇಂದು ಸಂಜೆಯಿಂದ ತಮಿಳುನಾಡು ಬಸ್ ಸಂಚಾರ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

KSRTC

ಮೈಸೂರು, ಆ.8-ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ತಮಿಳುನಾಡಿಗೆ ತೆರಳಬೇಕಿದ್ದ ಬಸ್‍ಗಳು ಇಂದು ಸಂಜೆಯಿಂದ ಪುನರಾರಂಭಗೊಳ್ಳಲಿವೆ.  ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ ನಿನ್ನೆ ಸಂಜೆಯಿಂದ ತಮಿಳುನಾಡಿಗೆ ಹೋಗುತ್ತಿದ್ದ ಬಸ್‍ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಗಿತಗೊಳಿಸಲಾಗಿತ್ತು. ಇಂದು ಅಂತ್ಯಕ್ರಿಯೆ ಪೂರ್ಣಗೊಳ್ಳುವುದರಿಂದ ಸಂಜೆ 7ರ ನಂತರ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin