ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ವಿಪಕ್ಷ ಅಭ್ಯರ್ಥಿ

ಈ ಸುದ್ದಿಯನ್ನು ಶೇರ್ ಮಾಡಿ

B.K.Hariprasad
ನವದೆಹಲಿ, ಆ.8- ಸಂಸತ್ತಿನ ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ನಾಳೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿದ್ದಾರೆ.  ಮೇಲ್ಮನೆ ಉಪಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕಡೆ ದಿನ. ಬಿಜೆಪಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ಬಿ.ಕೆ.ಹರಿಪ್ರಸಾದ್ ಅವರನ್ನು ಜಂಟಿ ಉಮೇದುವಾರರನ್ನಾಗಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ. ಸಂಯುಕ್ತ ಜನತಾದಳದ ಹರಿವಂಶ ನಾರಾಯಣಸಿಂಗ್ ಈಗಾಗಲೇ ಎನ್‍ಡಿಎ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

64 ವರ್ಷಗಳ ಹರಿಪ್ರಸಾದ್ ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುವ ಹಿರಿಯ ಕಾಂಗ್ರೆಸ್ ಸದಸ್ಯರು. ಇದರೊಂದಿಗೆ ಹರಿಪ್ರಸಾದ್ ಅವರು ಕಣದಲ್ಲಿರುವುದರಿಂದ ನಾಳೆ ನಡೆಯಲಿರುವ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.

Facebook Comments

Sri Raghav

Admin