ಮುಂಬೈನಲ್ಲಿ ನಿನ್ನೆ ಸಂಭವಿಸಿದ ಅಗ್ನಿ ದುರಂತದಲ್ಲಿ 50ಕ್ಕೂ ಹೆಚ್ಚು ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Mumbaoi--01

ಮುಂಬೈ, ಆ.9-ವಾಣಿಜ್ಯ ರಾಜಧಾನಿ ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಿನ್ನೆ ಅಪರಾಹ್ನ ಚೆಂಬೂರ್‍ನ ಮಹಲ್ ಗಾಂವ್‍ನಲ್ಲಿರುವ ಬಿಪಿಸಿಎಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ. ಒಂಭತ್ತು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಹರಸಾಹಸ ಮಾಡಿ ಬೆಂಕಿ ನಂದಿಸಿದರು. ಗಾಯಾಳುಗಳಲ್ಲಿ 22 ಕಾರ್ಮಿಕರಿಗೆ ಬಿಸಿಪಿಎಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಉಳಿದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದೆ. ಅವರಿಗೆ ಚೆಂಬೂರ್‍ನ ಇಂಡೆಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Facebook Comments

Sri Raghav

Admin