ಇಂಡೋನೆಷ್ಯಾ ಭೂಕಂಪದಲ್ಲಿ ಸತ್ತವರ ಸಂಖ್ಯೆ 347ಕ್ಕೇರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

indonatia--01

ಮಟರಮ್, ಆ.9-ಇಂಡೋನೆಷ್ಯಾದ ವಿಹಾರ ದ್ವೀಪ ಲೊಮ್‍ಬೊಕ್‍ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ ಸತ್ತವರ ಸಂಖ್ಯೆ 347ಕ್ಕೇರಿದೆ. ಗಾಯಗೊಂಡಿರುವ 1,400ಕ್ಕೂ ಅಧಿಕ ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಪ್ರಕೃತಿ ವಿಕೋಪದಲ್ಲಿ 1.56,000ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದು. ಅವರಿಗೆ ಆಹಾರ, ನೀರು, ಔಷಧಿ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸುವ ತುರ್ತು ಕಾರ್ಯದಲ್ಲಿ ನಿರತರಾಗಿದ್ದಾರೆ.

ಭೂಕಂಪದ ನಂತರ ಮನೆಮಠಗಳನ್ನು ಕಳೆದುಕೊಂಡಿ ಬೀದಿಪಾಲಾಗಿರುವ ಸಂತ್ರಸ್ತರಿಗೆ ಮೈದಾನಗಳು ಮತ್ತು ರಸ್ತೆಗಳ ಪಕ್ಕದಲ್ಲಿ ತಾತ್ಕಾಲಿಕ ಟೆಂಟ್‍ಗಳು ಮತ್ತು ಗುಡಾರಗಳ ಸೌಲಭ್ಯಗಳನ್ನು ಕಲ್ಪಿಸಿ ತಾತ್ಕಾಲಿಕ ಆಶ್ರಯ ನೀಡಲಾಗಿದೆ. ತೀವ್ರ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Facebook Comments

Sri Raghav

Admin