ಬಂಡೆಗೆ ಕಾರು ಡಿಕ್ಕಿ ಹೊಡೆದು ಶಾಸಕರ ಮೊಮ್ಮಗ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accidednt--011

ಕೊಪ್ಪಳ, ಆ.9- ಬಂಡೆಗಲ್ಲಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಸಕರ ಮೊಮ್ಮಗ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಹೊರವಲಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಸಕ ಅಮರೇಗೌಡ ಬಯ್ಯಾಪುರ ಅವರ ಮೊಮ್ಮಗ ಲಿಂಗನಗೌಡ ಸಾವನ್ನಪ್ಪಿದ ಯುವಕ.  ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Facebook Comments

Sri Raghav

Admin