ಸೆಲ್ಫಿ ತೆಗೆದುಕೊಳ್ಳುವ ವೇಳೆ ನದಿಗೆ ಬಿದ್ದಿದ್ದ ಯುವಕನ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Kiran--01
ತರೀಕೆರೆ,ಆ.9- ಸೆಲ್ಫಿ ತೆಗೆದುಕೊಳ್ಳಲು ಹೋಗಿ ಭದ್ರಾ ನದಿಗೆ ಬಿದ್ದು ಮೃತಪಟ್ಟಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ಜು.26ರಂದು ಇಂಜಿನಿಯರ್ ಕಿರಣ್ ಎಂಬುವರು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ನದಿಗೆ ಬಿದ್ದಿದ್ದರು.

ತಕ್ಷಣವೇ ಪೊಲಿಸರಿಗೆ ಮಾಹಿತಿ ನೀಡಿದ ಸ್ಥಳೀಯರು ಶವಕ್ಕಾಗಿ ಹುಡುಕಾಟ ನಡೆಸಿದ್ದರು. ಆದರೆ ಶವ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಭದ್ರ ನದಿಯಲ್ಲಿ ಕಿರಣ್ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ತುಂಬೆ ಗ್ರಾಮದ ನಿವಾಸಿ ಕಿರಣ್ ಕೋಟ್ಯಾನ್ ಮೃತ ದುರ್ದೈವಿ. ಮಂಗಳೂರಿನಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಕಿರಣ್‌ ತನ್ನ ಸ್ನೇಹಿತರೊಂದಿಗೆ ಹೋಗಿದ್ದ ವೇಳೆ ಘಟನೆ ನಡೆದಿತ್ತು. ಬಂಡೆಯ ಮೇಲೆ ನಿಂತು ಸೆಲ್ಫಿ ತೆಗೆಯುವಾಗ ಕಿರಣ್ ಕಾಲು ಜಾರಿ ನದಿಗೆ ಬಿದ್ದಿದ್ದ.

Facebook Comments

Sri Raghav

Admin