ಇದೇ 13ರಂದು ಬೀದರ್’ಗೆ ರಾಹುಲ್ ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--01

ಬೀದರ್, ಆ.10- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಇದೇ 13ರಂದು ಬೀದರ್ ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೆಹರು ಕ್ರೀಡಾಂಗಣದ ವೇದಿಕೆಯ ಪೂರ್ವಭಾವಿ ತಯಾರಿಯನ್ನು ಪರಿಶೀಲಿಸಿದರು. ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬೀದರ್ ಗೆ ಆಗಮಿಸುತ್ತಿರುವ ರಾಹುಲ್‍ಗಾಂಧಿ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಕೋಟೆ ನಗರ ಬೀದರ್‍ಗೆ ಆಗಮಿಸಿದ ದಿನೇಶ್ ಗುಂಡೂರಾವ್, ರಾಘವೇಂದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ ಸಮಾವೇಶದ ಸ್ಥಳಕ್ಕೆ ತೆರಳಿದರು.  ವೇದಿಕೆಯ ಸಿದ್ಧತೆ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಶಾಸಕ ರಹೀಂಖಾನ್, ಜಿಲ್ಲಾಧ್ಯಕ್ಷ ಬಸವರಾಜ್ ಜಾಬಶೆಟ್ಟಿ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಇವರಿಗೆ ಸಾಥ್ ನೀಡಿದರು.

Facebook Comments

Sri Raghav

Admin