ಸಮಾಧಿಯಿಂದ 2 ಶವಗಳನ್ನು ಹೊರತೆಗೆದು ತಲೆ ಕತ್ತರಿಸಿಕೊಂಡು ಹೋದರು..!

ಈ ಸುದ್ದಿಯನ್ನು ಶೇರ್ ಮಾಡಿ

Dead-Body--01
ತುಮಕೂರು, ಆ.10-ಸಮಾಧಿಯಾಗಿದ್ದ ಇಬ್ಬರು ವ್ಯಕ್ತಿಗಳ ತಲೆಯನ್ನು ಕತ್ತರಿಸಿಕೊಂಡು ಹೋಗಿರುವ ಭೀಭತ್ಸ ಘಟನೆಯೊಂದು ಶಿರಾ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದು ವರ್ಷದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಕಲ್ಲಿಕೋಟೆಯ ದೇವರಾಜ್ ಹಾಗೂ ಅನಾರೋಗ್ಯದಿಂದ ಮೃತಪಟ್ಟಿದ್ದ ಮಂಜುನಾಥ್ ಎಂಬುವರ ಶವಗಳನ್ನು ಸಮಾಧಿಯಿಂದ ಹೊರತೆಗೆದು ತಲೆಗಳನ್ನು ಹೊತ್ತೊಯ್ದಿದ್ದಾರೆ.

ಈ ಪ್ರಕರಣ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಯಾವ ಉದ್ದೇಶಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin