ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ ನೀಡು ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.10- ಕೇರಳ ವೈನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯಕ್ಕೆ ಅಪಾರಪ್ರಮಾಣದ ನೀರು ಹರಿದು ಬರುತ್ತಿದ್ದು. ಜಲಾಶಯದಿಂದ ಕಪಿಲಾ ನದಿಗೆ 80ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಭರ್ತಿಯಾಗಿದ್ದ ಕಬಿನಿ ಜಲಾಶಯಕ್ಕೆ ನಿರಂತರವಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ನಿನ್ನೆಯಿಂದಲೇ ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿತ್ತು. ಇಂದು 80ಸಾವಿರ ಕ್ಯೂಸೆಕ್‍ಗೆ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಇದರಿಂದ ಕಬಿನಿ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Kabini-Dam--01

Facebook Comments

Sri Raghav

Admin