ಭೀಮನ ಅಮವಾಸೆಯಂದು ಪತಿ ಪಾದಪೂಜೆ ಏಕೆ ಮಾಡುತ್ತಾರೆ..? ಹೇಗೆ ಮಾಡಬೇಕು..?

ಈ ಸುದ್ದಿಯನ್ನು ಶೇರ್ ಮಾಡಿ

ashada-1ಹಿಂದೂಗಳ ಸಂಪ್ರದಾಯದಂತೆ ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ, ಆಷಾಢದ ಕೊನೆಯ ದಿನ ಅಮಾವಾಸ್ಯೆ ಬರುತ್ತದೆ. ಈ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವ ದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ಪತಿ ಸಂಜೀವಿನಿ ವ್ರತ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.

ಭೀಮನ ಅಮಾವಾಸ್ಯೆಯನ್ನು ಮದುವೆ ಯಾದವರು ಮಾತ್ರವಲ್ಲ, ಮದುವೆಯಾಗದ ಹೆಣ್ಣು ಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣು ಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ಮಕ್ಕಳು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.

ಪೂಜಾ ವಿಧಾನ
ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋತಿರ್ಭೀಮೇಶ್ವರರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು. ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಬ ಇಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ-ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜತೆಗೆ 9 ಗಂಟಿನ ಗೌರಿದಾರ ಇಟ್ಟು ಪೂಜೆ ಮಾಡಿ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ನೆರವೇರಿಸಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸುವುದು ವಾಡಿಕೆ.

ವಿವಿಧ ರೀತಿಯ ಆಚರಣೆ
ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನವಾಗಿರುತ್ತದೆ. ಉದ್ದೇಶ ಒಂದೇ ಆದರೂ ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ಆಟಿ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕøತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ಕೂಡ ಅಮಾವಾಸ್ಯೆ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದ ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ. ಅದಕ್ಕಾಗಿ ಕೊಡೆ ಅಮಾವಾಸ್ಯೆ ಎಂಬ ಹೆಸರು ಬಂದಿದೆ.

 

ಕಾರವಾರದಲ್ಲಿ ಗಟಾರದ ಅಮಾವಾಸ್ಯೆ ಎಂಬ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಇಲ್ಲಿ ಮಾಂಸ, ಮದಿರೋವಾ ಸಕಲ ಮಹೋತ್ಸವವೆಂದೇ ಪ್ರಸಿದ್ಧಿ.
ಭಂಡಾರದ ವಿಶೇಷತೆ ಭಂಡಾರವನ್ನು ಕರಿಗಡುಬು ಮೈದಾ ಹಿಟ್ಟಿನಿಂದ ಮಾಡಿ ಕೊಳ್ಳಬಹುದು. ಇದನ್ನು ಮಾಡುವಾಗ ಇದರೊಳಗೆ ದುಡ್ಡು/ನಾಣ್ಯವನ್ನು ಇಡಬೇಕು. ಇದನ್ನು ಹೊಸ್ತಿಲ ಮೇಲೆ ಇಟ್ಟು ಪೂಜೆ ಮಾಡಬೇಕು. ಅಣ್ಣ-ತಮ್ಮ ಇದನ್ನು ಒಡೆಯುತ್ತಾರೆ. ಅವರಿಗೆ ಆರತಿ ಮಾಡಿ, ಒಳಗೆ ಇರುವ ದುಡ್ಡಿನ ಜತೆಗೆ ಉಡುಗೊರೆ ಕೊಡಬೇಕು.

ಪೌರಾಣಿಕ ಹಿನ್ನೆಲೆ
ಪುರಾಣಗಳ ಪ್ರಕಾರ, ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ  ದಿನದಂದು ಹೆಂಗೆಳೆಯರು ವ್ರತ ಮಾಡಿಕೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮವಾದ ಗಂಡ ಸಿಗುತ್ತಾನೆ.
ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯಸ್ಸು , ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.

Facebook Comments

Sri Raghav

Admin